ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಏಕಾಂಗಿಯಾದ ಯಡಿಯೂರಪ್ಪ

Published on

ಹುಬ್ಬಳ್ಳಿ : ಸಾಮಾನ್ಯವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದರೆ ಅಲ್ಲಿ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ದಂಡು ಕಾಣಿಸುತ್ತಿತ್ತು. ಆದರೆ, ಭಾನುವಾರ ಯಡಿಯೂರಪ್ಪ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಾಗ ಯಾವುದೇ ಸ್ಥಳೀಯ ಮುಖಂಡರಾಗಲಿ, ಕಾರ್ಯಕರ್ತರಾಗಲಿ ಕಾಣಿಸಲಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯ ಮೂರುಸಾವಿರ ಮಠದ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿಯಿಂದ ಬೃಹತ್ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಯಡಿಯೂರಪ್ಪ ಅವರು 10.40ಕ್ಕೆ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದರು. 10.50ಕ್ಕೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, 10.55ಕ್ಕೆ ವಿಮಾನ ನಿಲ್ದಾಣದಿಂದ ಹೊರಟು ಹೋದರು. ಯಡಿಯೂರಪ್ಪ ಅವರನ್ನು ಸ್ವಾಗತಿಸಲು ಕೇವಲ 10-15 ನಿಮಿಷದವರೆಗೂ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಬಾರದೇ ಇರುವುದು ಹಲವಾರು ಶಂಕೆಗಳು ಉದ್ಭವಿಸುವಂತೆ ಮಾಡಿತ್ತು. ಬಿಡಿಎ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದ್ದರಿಂದಲೇ ಅವರ ಉಸಾಬರಿ ಬೇಡವೆಂದು ಅವರನ್ನು ಏಕಾಂಗಿ ಮಾಡಲಾಯಿತೇ ? ಎಂಬ ಪ್ರಶ್ನೆಗಳೂ ಉದ್ಭವಿಸಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net