ಹುಬ್ಬಳ್ಳಿಯ ನೇಹಾ ಪಾಟೀಲ್ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಹುಬ್ಬಳ್ಳಿಯ ನೇಹಾ ಪಾಟೀಲ್ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
Published on

ಹಾಸನ: ಹುಬ್ಬಳ್ಳಿಯಲ್ಲಿ ಇತ್ತೀಚೇಗೆ ನಡೆದ ವಿದ್ಯಾರ್ಥಿನಿ ನೇಹಾ ಪಾಟೀಲ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ವತಿಯಿಂದ ಸೋಮವಾರ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ನಗರದ ಹೇಮಾವತಿ ಪ್ರತಿಮೆ ಎದುರು ಪ್ರತಿಭಟನಾಕಾರರು ರಸ್ತೆ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಆಕ್ರೋಶ ವ್ಯಕ್ತಪಡಿಸಿದರು. ಆದರೆ ಪ್ರತಿಭಟನಾಕಾರನ್ನು ಮನವೂಲಿಸಲು ಪೊಲೀಸರು ಹರಸಾಹಸ ಪಟ್ಟರು. ನಂತರ ಅವರನ್ನು ಬಂಧಿಸಿ ಕರೆದೊಯ್ದರು.
ಈ ವೇಳೆ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರೇಣುಕುಮಾರ್ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಪಾಟೀಲ್ ಹತ್ಯೆ ಸೇರಿ ಇಡೀ ರಾಜ್ಯದಲ್ಲಿ ಅನೇಕ ಘಟನೆಗಳು ನಡೆಯುತ್ತಿವೆ. ಕರ್ನಾಟಕದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ. ತಾಲಿಬಾನ್ ಸರ್ಕಾರ ಎಂಬ ಭಾವನೆ ಸಾಮಾನ್ಯ ಜನರಲ್ಲಿ ಮೂಡುತ್ತಿದೆ ಎಂದು ದೂರಿದರು.
ವಿದ್ಯಾರ್ಥಿನಿ ನೇಹಾ ಹತ್ಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗು ಸಚಿವರು ಹಗುರವಾಗಿ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಜೈ ಶ್ರೀರಾಮ್ ಎಂದು ಕೂಗಿದರೆ ಅವರ ಮೇಲೆ ಹಲ್ಲೆ ಮಾಡುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎಂಬ ಆತಂಕ ಮುಡಿದೆ. ಮೋದಿ ಮೇಲೆ ಹಾಡು ಬರೆದರೂ ಹಲ್ಲೆ ಮಾಡುತ್ತಾರೆ. ಆದರೆ ಪಾಕಿಸ್ತಾನ್ ಜಿಂದಾಬಾದ್ ಎಂದು ವಿಧಾನಸೌಧದ ಒಳಗೇ ಕೂಗಿದರೂ ಅವರಿಗೆ ಏನೂ ಆಗುವುದಿಲ್ಲ. ಇಂತಹ ಕೆಟ್ಟ ಸರ್ಕಾರವನ್ನು ತೊಲಗಿಸಬೇಕು. ಅಲ್ಲದೇ ನೇಹಾ ಹತ್ಯೆ ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಆಗ್ರಹಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಶೋಭನ್ ಬಾಬು, ಚನ್ನಕೇಶವ, ವೇಣುಗೋಪಾಲ್, ಪ್ರೀತಿವರ್ಧನ್, ನೇತ್ರಾವತಿ ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net