ಹುಬ್ಬಳ್ಳಿಯಲ್ಲಿ ಅರುಣ ಸಿಂಗ್ ಸಂಚಾರ, ವಿವಿಧ ಫಲಾನುಭವಿಗಳೊಂದಿಗೆ ಸಂವಾದ

h16- Arun- ambedkar 2
????????????????????????????????????
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್ ಅವರು ಭಾನುವಾರ ಬೆಳಗ್ಗೆಯಿಂದ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದರು.

ಹುಬ್ಬಳ್ಳಿಯ ಮೂರುಸಾವಿರ ಮಠಕ್ಕೆ ಭೇಟಿ ನೀಡಿದ ಅರುಣ ಸಿಂಗ್ ಅವರು ಕರ್ತೃ ಶ್ರೀ ಗುರುಸಿದ್ಧೇಶ್ವರರ ಗದ್ದುಗೆ ದರ್ಶನ ಪಡೆದರು. ನಂತರ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕೆಲಹೊತ್ತು ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿದ ಅವರು ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನು ಹೊಗಳಿದರು. ನಮ್ಮ ದೇಶ ಆಧ್ಯಾತ್ಮಿಕವಾಗಿ ಒಂದಾಗಿದೆ. ಸ್ವಾಮೀಜಿಗಳ ಆಶೀರ್ವಾದದಿಂದ ಕೇಂದ್ರ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದರು.

ಹುಬ್ಬಳ್ಳಿಯ ರೈಲು ನಿಲ್ದಾಣ ಬಳಿಯ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಅರುಣ್ ಸಿಂಗ್ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಮೂರುಸಾವಿರ ಮಠದ ಸಭಾಭವನದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಏರ್ಪಡಿಸಿದ್ದ ಸಂವಾದಲ್ಲಿ ಸಿಂಗ್ ಪಾಲ್ಗೊಂಡರು. ಅಲ್ಪಸಂಖ್ಯಾತರು, ವಿವಿಧ ಸಮುದಾಯಗಳ ಜನರು ಸಂವಾದದಲ್ಲಿ ಭಾಗಿಯಾಗಿದ್ದರು. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಕೇಂದ್ರ ಸರ್ಕಾರದ ಧ್ಯೇಯವಾಗಿದ್ದು, ಅದರಂತೆ ಪ್ರಧಾನಿಯವರು ಎಲ್ಲರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಸರ್ಕಾರಿ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳು ತಮ್ಮ ಸಂತಸ ಹಂಚಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net