

ಹುಬ್ಬಳ್ಳಿ: ಧಾರವಾಡ ಐಐಟಿ ಸೇರಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಿನ್ನೆಲೆಯಲ್ಲಿ ನಗರದ ವಿಮಾನ ನಿಲ್ದಾಣಕ್ಕೆ ಭಾನುವಾರ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.
ಮಧ್ಯಾಹ್ನ 3 ಗಂಟೆಗೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಇದ್ದರು.
ವಿಮಾನ ನಿಲ್ದಾಣದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಹಾಗೂ ಪೊಲೀಸ್ ಆಯುಕ್ತ ರಮಣ್ ಗುಪ್ತಾ, ಇತರ ಅಧಿಕಾರಿಗಳು ಸ್ವಾಗತ ನೀಡಿದರು.
ಹುಬ್ಬಳ್ಳಿಯಿಂದ ಧಾರವಾಡಕ್ಕೆ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ನಲ್ಲಿ ಪ್ರಧಾನಿಯವರು ಮತ್ತೆ ಪ್ರಯಾಣ ಬೆಳೆಸಿದರು.