ಹುಲಿ ದತ್ತು ಪಡೆದ ಶಾಸಕಿ ಹೆಬ್ಬಾಳ್ಕರ್

14Manju4-Web
ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದ ಅಧಿಕಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು 1 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಉದ್ಯಮಿ ಚನ್ನರಾಜ ಹಟ್ಟಿಹೊಳಿ ಇತರರು ಇದ್ದರು.
Published on

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಶೌರ್ಯ ಎನ್ನುವ ಹುಲಿ ದತ್ತು ಪಡೆದಿದ್ದಾರೆ.

ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸೋಮವಾರ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ, ಶೌರ್ಯ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ. ಆರಂಭಿಕವಾಗಿ ಅರಣ್ಯ ಇಲಾಖೆ ಅಧಿಕಾರಿಗೆ 1 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಈ ಹುಲಿಯ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದು, ಇದರ ಜೀವಿತಾವಧಿಯವರೆಗೆ ಇದರ ಆರೈಕೆಯು ನನ್ನ ಮೇಲಿರುತ್ತದೆ. ಲಾಕ್‌ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಜನರ ಬರುವಿಕೆ ಕಡಿಮೆಯಾಗಿದ್ದು, ಪ್ರಾಣಿ ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಂತೋಷದಿಂದ ಈ ಶೌರ್ಯ ಹುಲಿಯನ್ನು ದತ್ತು ಪಡೆದಿದ್ದೇನೆ. ಸಾರ್ವಜನಿಕರು ಪ್ರಾಣಿಗಳ ಆರೈಕೆಗೆ ಮುಂದಾಗುವ ಮೂಲಕ ಮಾನವೀಯತೆಗೆ ತೋರಬೇಕು ಎಂದು ವಿನಂತಿಸಿದರು.

ಉದ್ಯಮಿ ಚನ್ನರಾಜ ಹಟ್ಟಿಹೊಳಿ ಹಾಗೂ ಅರಣ್ಯಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net