ಹುಲಿ ದಾಳಿಗೆ ಹಸು ಬಲಿ

IMG-20230829-WA0026
Published on

ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಮಂಗಳವಾರ ಹುಲಿ ದಾಳಿಯಿಂದ ಹಸು ಮೃತಪಟ್ಟಿದೆ.


ತಾಲೂಕಿನ ಮೇಟಿಕುಪ್ಪೆ ಗ್ರಾಮದ ಸುರೇಶ್ ಅವರ ಹಸು ಇದಾಗಿದ್ದು, ಇವರ ಅಣ್ಣ, ಅತ್ತಿಗೆ ಹಸುಗಳನ್ನು ಜಮೀನಿನಲ್ಲಿ ಮೇಯಲು ಬಿಟ್ಟು ಕೆಲಸ ಮಾಡುತ್ತಿದ್ದರು. ಈ ವೇಳೆ ಪೊದೆಯಿಂದ ಬಂದ ಹುಲಿ ಹಸುವಿನ ಮೇಲೆ ದಾಳಿ ನಡೆಸಿ, ಎಳೆದುಕೊಂಡು ಹೋಗಿದೆ.


ಅಕ್ಕಪಕ್ಕದಲ್ಲಿದ್ದ ಜನರು ಕೂಗಾಡಿದ ಹಿನ್ನೆಲೆಯಲ್ಲಿ ಹಸುವನ್ನು ಬಿಟ್ಟು, ಹುಲಿ ಕಾಲ್ಕಿತ್ತಿಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಬಂದು ಪರಿಶೀಲಿಸದೆ ನಿರ್ಲಕ್ಷೃ ವಹಿಸಿದ್ದಾರೆ ಎಂದು ಸುರೇಶ್ ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net