

ಹನೂರು: ಐದು ಹುಲಿಗಳ ಸಾವಿನ ಪ್ರಕಣರದ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹನೂರು ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎ್ಸಿ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.
ಹನೂರು ತಾಲೂಕಿನ ಮೀಣ್ಯಂ ಬಳಿಯ ಅರಣ್ಯದಲ್ಲಿ ಜೂ.26 ರಂದು ಐದು ಹುಲಿಗಳಿಗೆ ವಿಷಪ್ರಾಶನ ಹಾಕಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಾದ ಮಾದರಾಜ್, ನಾಗರಾಜು, ಕೊನಪ್ಪ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನಡೆದ ವಿಚಾರಣೆಯಲ್ಲಿ ಹನೂರಿನ ಜೆಎಂಎ್ಸಿ ನ್ಯಾಯಧೀಶೆ ಕಾವ್ಯಶ್ರೀ ಅವರು ಬಂಧಿತ ಮೂವರು ಆರೋಪಿಗಳಿಗೆ ಜಾಮೀನು ನೀಡ ದಂತೆ ಹಾಗೂ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಜಾಮೀನು ಅರ್ಜಿ ವಿಚಾರಣೆಯ ವೇಳೆ ವಾದ ಮಂಡಿಸಿದ ಸಹಾಯಕ ಸರ್ಕಾರಿ ಅಭಿಯೋಜಕಿ ಪುಟ್ಟಮಣಿ ಪ್ರಸನ್ನ ಅವರು, ಪ್ರಕರಣದ ಗಂಭೀರತೆ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದರು. ಈ ಘಟನೆಯು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದ್ದು, ಆರೋಪಿಗಳಿಗೆ ಜಾಮೀನು ನೀಡಿದರೆ ತನಿಖೆಗೆ ಅಡ್ಡಿಯಾಗಬಹುದು ಎಂದು ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ. ವಾದವನ್ನು ಆಲಿಸಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.