ಹೂ ನೀಡಿ ಸ್ವಾಗತಿಸಿದ ತಹಸೀಲ್ದಾರ್

21KUDLIGI1
Published on

ಕೂಡ್ಲಿಗಿ: ತಾಲೂಕಿನ ವಿವಿಧ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಅತ್ಯಂತ ಶಾಂತಿಯುತವಾಗಿ ನಡೆದಿವೆ. ಪಟ್ಟಣದ ಮೂರು ಕೇಂದ್ರ ಸೇರಿದಂತೆ ತಾಲೂಕಿನ 17 ಕೇಂದ್ರಗಳಲ್ಲಿ ಪ್ರಥಮ ಭಾಷೆ ಪರೀಕ್ಷೆ ಶುಕ್ರವಾರ ಬೆಳಗ್ಗೆ 10 ಕ್ಕೆ ಆರಂಭವಾಯಿತು. ಒಟ್ಟು 4,932 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 120 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಬಿಇಒ ಪದ್ಮನಾಭ ಕರಣಂ ತಿಳಿಸಿದರು.

ತಾಲೂಕಿನ ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಯೊಂದಿಗೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ತಹಸೀಲ್ದಾರ್ ವಿ.ಕೆ.ನೇತ್ರಾವತಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಆರಂಭಕ್ಕೂ ಮುನ್ನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ತಹಸೀಲ್ದಾರ್ ವಿ.ಕೆ.ನೇತ್ರಾವತಿ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ಧೈರ್ಯವಾಗಿ ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net