

ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮೊದಲ ದಿನ ಶುಕ್ರವಾರ ನಾನಾ ಹಿರಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಆಲ್‌ದಿ ಬೆಸ್ಟ್ ಹೇಳಿ ದರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾ ರ್ಥಿಗಳಿಗೆ ಗುಲಾಬಿ ಹೂವು ಹಾಗೂ ಸಿಹಿ ವಿತರಿಸಿ ಸ್ವಾಗತಿಸಿ,ಶುಭ ಹಾರೈಸಿದರು.
ಈ ಪರೀಕ್ಷೆ ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟವಾಗಿದ್ದು,ಏಪ್ರಿಲ್ 4ರವರೆಗೆ ನಡೆಯಲಿದೆ. ಪರೀಕ್ಷೆಯನ್ನು ಹಬ್ಬದಂತೆ ಆ ಚರಿಸಬೇಕು. ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು. ಈ ಬಾರಿ ಜಿಲ್ಲೆಗೆ ಉತ್ತಮ ಫಲಿತಾಂಶ ಪಡೆ ಯುವ ನಿಟ್ಟಿನಲ್ಲಿ ಕಳೆದ ಆರು ತಿಂಗಳಿಂದಲೂ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆ ಫಲಿತಾಂಶದಲ್ಲಿ ಉತ್ತ ಮ ಸ್ಥಾನವನ್ನು ಗಳಿಸಲು ಹಲವು ಪ್ರಯತ್ನಗಳನ್ನು ನಡೆಸಲಾಗಿದೆ ಎಂದರು.
ಎಡಿಸಿ ಬಿ.ಟಿ.ಕುಮಾರಸ್ವಾಮಿ,ಡಿಡಿಪಿಐ ಎಂ.ಆರ್.ಮಂಜುನಾಥ್,ಬಿಇಒ ಎಸ್.ನಾಗಭೂಷಣ್,ನಗರಸಭೆ ಪೌರಾಯುಕ್ತೆ ಎಂ.ರೇ ಣುಕಾ ಮತ್ತಿತರ ಅಧಿಕಾರಿಗಳಿದ್ದರು.
943 ವಿದ್ಯಾರ್ಥಿಗಳು ಗೈರು
ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನದ ಕನ್ನಡ ವಿಷಯದ ಪರೀಕ್ಷೆಗೆ 22,229 ವಿದ್ಯಾರ್ಥಿಗಳು ಹಾಜರಾಗಿದ್ದು,943 ವಿದ್ಯಾರ್ಥಿಗಳು ಗೈರಾ ಗಿದ್ದರು. ಜಿಲ್ಲೆಯಲ್ಲಿ ಕನ್ನಡ ವಿಷಯದ ಪರೀಕ್ಷೆಗೆ 23,172 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಚಳ್ಳಕೆರೆ ತಾಲೂಕಿನಲ್ಲಿ 4,9 11ವಿದ್ಯಾರ್ಥಿಗಳು. ಚಿತ್ರದುರ್ಗ-6,276. ಹಿರಿಯೂರು-3,389.ಹೊಳಲ್ಕೆರೆ-2,596.
ಹೊಸದುರ್ಗ-2,865 ಹಾಗೂ ಮೊಳಕಾಲ್ಮೂರು-2,192 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 22,229 ವಿದ್ಯಾರ್ಥಿಗಳು ಹಾಜರಾಗಿ ದ್ದರು. ಜಿಲ್ಲೆಯ 82 ಪರೀಕ್ಷೆ ಕೇಂದ್ರಗಳಲ್ಲಿ ಪ ರೀಕ್ಷೆ ಸುಗಮವಾಗಿ ನಡೆಯಿತು ಎಂದು ಡಿಡಿಪಿಐ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.
----