ಹೃದಯ ಜ್ಯೋತಿ ಯೋಜನೆ ಬಲವರ್ಧನೆ:  ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಬಿ. ದಿನೇಶ್

Sudhee_11_New_Director_B_Dinesh_PM_@_Jayadeva_Institute (1)
Published on

ಮೈಸೂರು: ಭವಿಷ್ಯದಲ್ಲಿ ಹೆಚ್ಚಾಗಲಿರುವ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಹೃದ್ರೋಗ ಚಿಕಿತ್ಸೆ ದೊರಕಿಸಿಕೊಡಲು ಎಲ್ಲ ಜಿಲ್ಲೆಗಳಲ್ಲೂ ಸ್ಯಾಟಲೈಟ್ ಹೃದ್ರೋಗ ಕೇಂದ್ರ ತೆರೆಯಲಾಗುವುದು ಎಂದು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಬಿ. ದಿನೇಶ್ ಹೇಳಿದರು.

ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭಾನುವಾರ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡ ನಂತರ ಮಾತನಾಡಿದರು.

2040ರ ವೇಳೆಗೆ ಜನಸಂಖ್ಯೆ ಶೇ.15ರಷ್ಟು ಹೆಚ್ಚಾಗುತ್ತದೆ. ಆ ನಿಟ್ಟಿನಲ್ಲಿ ಸಂಸ್ಥೆಯು ಅಗತ್ಯ ಮೂಲ ಸೌಕರ್ಯ ಹೆಚ್ಚಿಸಿಕೊಂಡು ಸೇವೆ ವಿಸ್ತರಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೊಂದು ಸ್ಯಾಟಲೈಟ್ ಸೆಂಟರ್ ಮಾಡಲು ಪ್ರಯತ್ನಿಸಲಾಗುತ್ತಿದೆ. ಈ ಕುರಿತು ಸರ್ಕಾರದಿಂದ ಅನುಮೋದನೆ ಪಡೆದು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.

ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಯಲ್ಲಿದೆ. ಇದರಿಂದ ತಾಲೂಕು ಹಂತದಲ್ಲಿಯೇ ಹೃದ್ರೋಗಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಇದರಿಂದ ತಾಲೂಕು ಮಟ್ಟದಲ್ಲೇ ಗೋಲ್ಡನ್ ಅವರ್‌ನಲ್ಲಿ ಚಿಕಿತ್ಸೆ ದೊರೆಯುತ್ತಿದೆ. ಸಾವಿರಾರು ಹೃದ್ರೋಗಿಗಳ ಜೀವ ಉಳಿದಿದೆ. ಆದ್ದರಿಂದ ಈ ಯೋಜನೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲಾಗುವುದು ಎಂದು ತಿಳಿಸಿದರು.

ಮೈಸೂರು ಜಯದೇವಕ್ಕೆ 5 ಜಿಲ್ಲೆಗಳಿಂದ ಜನರು ಹೆಚ್ಚಾಗಿ ಬರುತ್ತಿದ್ದಾರೆ. ಅಲ್ಲದೆ, ನೆರೆಯ ಕೇರಳ, ಕೊಯಮತ್ತೂರಿನಿಂದ ಜನ ಬರುತ್ತಿದ್ದಾರೆ.

ಆದರೆ ಇಲ್ಲಿ ಶೇ.20ರಷ್ಟು ವೈದ್ಯರ, ಶೇ.18 ದಾದಿಯರು, ಶೇ.15ರಷ್ಟು ಗ್ರೂಪ್ ಡಿ ಕೊರತೆ ಇದ್ದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಆಗ ಒಪಿಡಿ ಸೇವೆ ನೀಡುವಲ್ಲಿ ಆಗುತ್ತಿರುವ ವಿಳಂಬ ತಪ್ಪಲಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net