

ಚಿತ್ರದುರ್ಗ: ನಗರದ ಇಂಡಿಯಾನ ಹಾರ್ಟ್ ಕ್ಲಿನಿಕ್ ಸಹಯೋಗದೊಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಹೃದಯ ತಪಾಸಣೆ ಕ್ಲಿನಿಕ್ ಪ್ರಾರಂಭಿಸಲಾಗಿದೆ. ಪ್ರತಿ ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರ ವರೆಗೆ ಹೃದಯ ತಜ್ಞರೊಂದಿಗೆ ಉಚಿತ ಸಮಾಲೋಚನೆ ಇರುತ್ತದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.