ಹೃದಯವಂತ ಪ್ರಶಸ್ತಿಗೆ ಅಬ್ದುಲ್ ಸುಭಾನ್ ಆಯ್ಕೆ

abdul Subhan
Published on

ಬೀದರ್: 14ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಪ್ರಯುಕ್ತ ನೀಡಲಾಗುವ ಹೃದಯವಂತ ಪ್ರಶಸ್ತಿಗೆ ಇಲ್ಲಿಯ ಅಬ್ದುಲ್ ಸುಭಾನ್ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ 27ರಂದು ನಡೆಯಲಿರುವ 14ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಾಂಗ್ರೆಸ್ ಮುಖಂಡ ಅಬ್ದುಲ್ ಮನ್ನಾನ್ ಸೇಠ್ ಪುತ್ರರಾಗಿರುವ ಅಬ್ದುಲ್ ಸುಭಾನ್, ಯುನೈಟೆಡ್ ಕಿಂಗ್‌ಡಂನ ಕೀಲೆ ವಿಶ್ವವಿದ್ಯಾಲಯದಿಂದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಫಾಲ್ಕನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಮುಖ್ಯಸ್ಥ ಮತ್ತು ಶಾಹೀನ್ ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಆಗಿದ್ದಾರೆ. ಶೈಕ್ಷಣಿಕ ಸೇವೆಗಾಗಿ ಭಾರತ ವಿದ್ಯಾ ಶಿರೋಮಣಿ, ಮೌಲಾನಾ ಆಝಾದ್ ರಾಷ್ಟ್ರೀಯ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net