ಹೆಗ್ಗವಾಡಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ

06Rajesh5
Published on

ಚಾಮರಾಜನಗರ: ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ವತಿಯಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಅರಣ್ಯ ಕೃಷಿಯ ವಿವಿಧ ರೀತಿಯ ಪದ್ಧತಿಗಳನ್ನು ಮಾದರಿಯ ಮುಖಾಂತರ ತಿಳಿಸಿದರು. ವಿವಿಧ ಅರಣ್ಯ ಸಸ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮದ ಮಕ್ಕಳಿಂದ ಕಿರು ನಾಟಕ ಪ್ರದರ್ಶನ ಮಾಡಿ ಜನರಲ್ಲಿ ಅರಿವು ಮೂಡಿಸಲಾಯಿತು. ಅರಣ್ಯ ಕೃಷಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಮಹದೇವ ರೈತರ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಅರಣ್ಯ ಮರಗಳಾದ ತೇಗ, ಸರ್ವೆ, ಹೆಬ್ಬೇವುಗಳನ್ನು ಬದುಗಳಲ್ಲಿ ನೆಡುವುದರಿಂದ ಅದರ ಎಲೆಗಳು ಉದುರಿ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ಬೆಳೆದ ಮರಗನ್ನು ಉಪಕರಣ ತಯಾರಿಸುವಲ್ಲಿ ಉಪಯೋಗಿಸಲಾಗುತ್ತದೆ. ಹಲವು ಹಣ್ಣುಗಳ ಮರಗಳನ್ನು ನೀಡುವುದರಿಂದ ರೈತರಿಗೆ ಉಪಯೋಗವಾಗುತ್ತದೆ. ಸರ್ಕಾರದ ಯೋಜನೆ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕೃಷಿ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net