

ಹಾಸನ : ಮತದಾನ ನೋಂದಣಿಗೆ ಕಾಲೇಜುಗಳಲ್ಲಿ ಯುವಕ/ಯುವತಿಯರಿಗೆ ಮತದಾನಕ್ಕೆ ನೋಂದಣಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜು ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಂಭಾಗಣದಲ್ಲಿಂದು ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯ ಸಭೆ ನಡೆಸಿ ಮಾತನಾಡಿದ ಅವರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿದಬೇಕು ಎಂದರು.
ವಿದ್ಯಾರ್ಥಿಗಳಿಗೆ ಪ್ರಬಂಧ, ಕ್ವಿಜ್,ಚಿತ್ರಕಲೆ ಸ್ಪರ್ದೆಗಳನ್ನು ಏರ್ಪಡಿಸುವಂತೆ ಅಧಿಕಾರಿ ಸಲಹೆ ಸೂಚನೆಗಳನ್ನು ನೀಡಿದರು.
ಪ್ರತಿ ಕಾಲೇಜುಗಳಲ್ಲಿ ಕ್ಯಾಂಪಸ್ ಅಭಾಸಿಡಾರ್‌ಗಳನ್ನೂ ನೇಮಕ ಮಾಡಿಕೊಳ್ಳಬೇಕು. ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಉಸ್ಮಾನ್, ಯುವಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಹರೀಶ್ ,ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಪರಪ್ಪಸ್ವಾಮಿ ಮತ್ತಿತರ ಸ್ವೀಟ್ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.