ಹೆಚ್ಚು ಬಹುಮಾನ ಪಡೆದ ಹೆಬ್ಬಾಲೆ ಪ್ರೌಢಶಾಲೆ

08Kush01
Published on

ಮಡಿಕೇರಿ : ಕುಶಾಲನಗರದ ಕೂಡಿಗೆಯಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹೆಬ್ಬಾಲೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತಿ ಹೆಚ್ಚು ಬಹುಮಾನ ಪಡೆದಿದ್ದಾರೆ.
ಬಾಲಕರ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಥ್ರೋಬಾಲ್ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕ ಹಾಗೂ ಬಾಲಕಿಯರ ಖೋ ಖೋ, ಶಟಲ್, ಬಾಲ್ ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ, 300 ಮೀಟರ್ ಓಟ ಮತ್ತು 100 ಮೀಟರ್ ಓಟದಲ್ಲಿ ಪ್ರಥಮ ಮತ್ತು 300 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಬಾಲಕರ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
200, 1500, 400 ಮೀಟರ್ ಓಟದಲ್ಲಿ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ತಿಳಿಸಿದ್ದಾರೆ. ಹೆಬ್ಬಾಲೆ ಪ್ರೌಢಶಾಲೆಯ ಆವರಣದಲ್ಲಿ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net