

ಸಿರವಾರ: ತಾಲೂಕಿನ ಜಕ್ಕಲದಿನ್ನಿ ಮತ್ತು ತಿಪ್ಪಲದಿನ್ನಿ ಅತ್ತನೂರು ನಿಲೋಗಲ್ ಗ್ರಾಮಕ್ಕೆ ಹೆಚ್ಚುವರಿ ಬಸ್ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಸೋಮವಾರ ಸಿರವಾರ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸತ್ಯಪ್ಪಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಗ್ರಾಮಗಳಿಂದ ಶಾಲಾ ಕಾಲೇಜಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಿರವಾರಕ್ಕೆ ಬರಲು ಸಮರ್ಪಕ ಬಸ್ ಸೌಲಭ್ಯವಿಲ್ಲ. ಈ ಮಾರ್ಗದಲ್ಲಿ ಸಂಚಾರಿಸುವ ಬಸ್‌ಗಳು ಭರ್ತಿ ಆಗುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ. ಬಸ್ ವ್ಯವಸ್ಥೆ ಇಲ್ಲದೆ ಅನೇಕ ಸಮಸ್ಯೆಗಳು ಎದುರಿಸುವಂತಾಗಿದೆ ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ ಬಸ್ ನೀಡಬೇಕು. ವೇಗದೂತ ಬಸ್‌ಗಳನ್ನು ಎಲ್ಲ ಗ್ರಾಮಗಳಲ್ಲಿ ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಿದರು.