

ಗೋಣಿಕೊಪ್ಪ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ದೊಡ್ಡಹಳ್ಳ ಗಸ್ತಿನ ರಸ್ತೆ ಸಮೀಪ 8-9 ವರ್ಷದ ಹೆಣ್ಣು ಚಿರತೆಯ ಕಳೇಬರ ಪತ್ತೆಯಾಗಿದೆ. ಈ ಚಿರತೆ ಹುಲಿ ದಾಳಿಯಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಯಿತು. ಚಿಕ್ಕನರಗುಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಕುಮಾರ್, ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರದ ನಾಮನಿರ್ದೇಶಕ ಕೆ.ಎನ್.ಮಾದಪ್ಪ, ಮುಖ್ಯ ವನ್ಯಜೀವಿ ಪರಿಪಾಲಕ ಡಾ.ಸಿ.ಕೆ.ತಮ್ಮಯ್ಯ , ಪಶು ವೈದ್ಯಾಧಿಕಾರಿಗಳಾದ ಡಾ. ರಮೇಶ್, ಡಾ. ಚಂದ್ರಶೇಖರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪಿ.ಗೋಪಾಲ್ ಉಪಸ್ಥಿತರಿದ್ದರು.