ಹೆಣ್ಣು ಮಕ್ಕಳ ಭದ್ರತೆ ಆದ್ಯತೆ ನೀಡಿ

bkt-27-4
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಹಳೆಯ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಸಭೆ ನಡೆಸಿದರು. ಡಿಸಿ ಜಾನಕಿ ಕೆ.ಎಂ., ಸಿಇಒ ಶಶಿಧರ ಕುರೇರ, ಎಸ್ಪಿ ಅಮರನಾಥ ರೆಡ್ಡಿ ಇದ್ದರು.
Published on

ಬಾಗಲಕೋಟೆ: ಹೆಣ್ಣು ಮಕ್ಕಳಿಗೆ ಭದ್ರತೆ ನೀಡುವ ವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.

ಜಿಲ್ಲಾ ಪಂಚಾಯಿತಿ ಹಳೆಯ ಸಭಾಂಗಣದಲ್ಲಿ ಮಂಗಳವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಮಹಿಳೆಯರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೊಲೀಸ್ ವರಿಷ್ಠಧಿಕಾರಿ ಹೆಚ್ಚಿನ ಗಮನ ನೀಡಬೇಕು. ಸ್ಥಳಿಯ ಪೊಲೀಸ್ ಠಾಣೆಗಳಿಗೆ ಮಹಿಳೆಯರು ಭೇಟಿ ನೀಡಿದ ಸಂದರ್ಭದಲ್ಲಿ ನೋಂದ ಜೀವಗಳಿಗೆ ಸರಿಯಾಗಿ ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಪೊಲೀಸ್ ಠಾಣೆಗಳು ಆಗುವಂತಹ ವ್ಯವಸ್ಥೆಯಾಗಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ ಅಲ್ಪ ಸಂಖ್ಯಾತರ ಮತ್ತು ಖಾಸಗಿ ಮಹಿಳಾ ವಸತಿ ನಿಲಯಯಗಳಲ್ಲಿ ಶಿಷ್ಠಾಚಾರದಂತೆ ಭದ್ರತೆ ಒದಗಿಸುವ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು. ಸುರಕ್ಷತೆ ಹಿತದೃಷ್ಠಿಯಿಂದ ಸಿಸಿ ಟಿವಿ ಇರುವುದು ಹಾಗೂ ವಾರ್ಡನ್‌ಗಳು ಮೊಬೈಲ್ ಆಪ್ ಬಳಸುವ ಕಾರ್ಯವಾಗಬೇಕು. ಸ್ಟ್ಯಾಂಡರ್ಡ ಪ್ರೋಟೋಕಾಲ್ ಅನುಸರಿಸಲೇಬೇಕು. ಇಲ್ಲದಿದ್ದಲ್ಲಿ ಅಂತಹ ವಸತಿ ನಿಲಯಗಳ ಮೇಲೆ ಕ್ರಮ ಕೈಗೊಳ್ಳುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಮಹಿಳೆಯರ ಸಹಾಯಕ್ಕಾಗಿ ಇರುವ ಸಹಾಯವಾಣ ಸಂಖ್ಯೆ ಮತ್ತು ಆಪ್‌ಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ಉನ್ನತ ಮಟ್ಟದ ಶಿಕ್ಷಣ ಪಡೆಯುತ್ತಿರುವ ಹೆಣ್ಣು ಮಕ್ಕಳಲ್ಲಿ ಕೂಡ ಇವುಗಳ ಕುರಿತು ಮಾಹಿತಿ ಇರುವದಿಲ್ಲಿ. ಈ ಹಿನ್ನಲೆಯಲ್ಲಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು, ವಿಶ್ವವಿದ್ಯಾಲಯ, ಶಾಲಾ ಕಾಲೇಜು ಏನೇ ಇರಲಿ ಅಲ್ಲಿ ಹೆಲ್ಪಲೈನ್ ಬಗ್ಗೆ ಜಾಗೃತಿ ಮೂಡಿಸಿ ಸ್ನೇಹಮಯ ವಾತಾವರಣ ಸೃಷ್ಠಿಸಬೇಕು ಎಂದರು.
ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಶೌಚಗೃಹ ಇನ್ನೂ ಕಂಡು ಬರುತ್ತಿಲ್ಲ. ಅನುದಾನ ಸದ್ಭಳಕೆಯಾಗಿ ಶೌಚಗೃಹ ನಿರ್ಮಿಸುವಂತಾಗಬೇಕು. ಹೆಣ್ಣು ಮಕ್ಕಳು ಕಾಣೆಯಾದಲ್ಲಿ ಟಾಸ್ಕ್ ಪೋರ್ಸ್ ರಚಿಸಿ ಕಾರ್ಯನಿರ್ವಹಿಸಿರಿ ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಮಖಂಡಿ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ಪ್ರಭಾಕರ ಕೆ. ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net