ಹೆಣ್ಣು ಮಕ್ಕಳ ಮೇಲೆ ನಿಲ್ಲದ ನಿರಂತರ ದೌರ್ಜನ್ಯ

21
Published on

ಮೈಸೂರು: ಆಧುನಿಕತೆಯೊಂದಿಗೆ ಅನುಸಂಧಾನಗೊಳ್ಳುತ್ತಿರುವ ಇಂದಿನ ದಿನಮಾದಲ್ಲಿಯೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಹಿಂದಿಗಿಂತಲೂ ಹೆಚ್ಚಾಗಿ ನಡೆಯುತ್ತಿವೆ ಎಂದು ನೃಪತುಂಗ ಸಂಸ್ಥೆಯ ಕಾರ್ಯದರ್ಶಿ ಸವಿತಾ ಮಲ್ಲೇಶ್ ಬೇಸರ ವ್ಯಕ್ತಪಡಿಸಿದರು.
ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜಿನ ಮಹಿಳಾ ಲೈಂಗಿಕ ಕಿರುಕುಳ ನಿವಾರಣಾ ಸಮಿತಿ ಮತ್ತು ಐಕ್ಯುಎಸಿಯಿಂದ ಶನಿವಾರ ಆಯೋಜಿಸಿದ್ದ ಸಮಾಜದಲ್ಲಿ ಮಹಿಳೆಯರ ಪ್ರಸ್ತುತ ಸನ್ನಿವೇಶ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಧಾರ್ಮಿಕ ಶ್ರದ್ಧಾ ಕೇಂದ್ರಗಳಂತಹ ಭಕ್ತಿ ಕೇಂದ್ರಗಳಲ್ಲಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅಮಾನವೀಯವಾಗಿ ದಬ್ಬಾಳಿಕೆ ದೌರ್ಜನ್ಯ ನಡೆಯುತ್ತಿದ್ದು ಇದು ಕೇಡಿನ ಕಾಲ ಎನ್ನುವ ಭಾವನೆ ಬರುತ್ತದೆ. ಕೋಮು ದಬ್ಬಾಳುರಿಯ ನೆಪದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡುವುದು ನಾವು ಯಾವ ಕಾಲದಲ್ಲಿ ಇದ್ದೇವೆ ಎನ್ನುವ ಭಯ ಉಂಟಾಗುತ್ತದೆ. ಇಂತಹ ಕಾಲಘಟ್ಟದಲ್ಲಿ ಮಹಿಳೆಯರು ಎಚ್ಚರಿಕೆ ವಹಿಸಿ ಧ್ವನಿ ಎತ್ತಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲಡಾ.ಡಿ. ರವಿ ಮಾತನಾಡಿ, ಸಮಾಜದಲ್ಲಿ ನಡೆಯುವ ಯಾವುದೇ ಅನ್ಯಾಯದ ವಿರುದ್ಧ ಮಹಿಳೆಯರು ಸೇರಿದಂತೆ ಎಲ್ಲರೂ ದ್ವನಿ ಎತ್ತಬೇಕು. ಮಹಿಳೆಯರು ಕಾನೂನಿನ ಬಗ್ಗೆ ಅರಿತು ಕೊಳ್ಳಬೇಕು. ಜತೆಗೆ ಅನ್ಯಾಯ ಮತ್ತು ದೌರ್ಜನ್ಯಗಳನ್ನು ತಡೆಯಲು ಸಂಘಟಿತರಾಗಿ ಹೋರಾಟ ಮಾಡಬೇಕು ಎಂದರು.
ಐಕ್ಯುಎಸಿ ಸಂಚಾಲಕ ವಿ.ನಂದಕುಮಾರ್, ಮಹಿಳಾ ಲೈಂಗಿಕ ಕಿರುಕುಳ ನಿವಾರಣಾ ಸಮಿತಿ ಸಂಚಾಲಕ ಎಚ್. ಜಾನಕಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net