ಹೆಣ್ಣು ಮಕ್ಕಳು ಸ್ವಯಂ ಉದ್ಯೋಗಕ್ಕೆ ತೊಡಕಿಕೊಳ್ಳಿ

22rajesh8
Published on

ಚಾಮರಾಜನಗರ: ಪ್ರಸ್ತುತ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಸ್ವಯಂ ಉದ್ಯೋಗಕ್ಕೆ ಹೆಚ್ಚಾಗಿ ತೊಡಗಿಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಮಾದರಿಯಾಗಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಉಪನಿರ್ದೇಶಕ ದೊರೈರಾಜು ಸಲಹೆ ನೀಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮಶಿಲತಾಭಿವೃದ್ಧಿ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮಶೀಲತೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರುತ್ತಿದೆ. ಹೆಣ್ಣು ಮಕ್ಕಳು ಉದ್ಯಶೀಲತಾ ಕೌಶಲ್ಯವನ್ನು ಪಡೆದುಕೊಂಡು ಉತ್ತಮ ಸಾದನೆ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ವಿಜಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ನಿಲ್ಲಿಸಿ, ಓದಿನ ಕಡೆಗೆ ಹೆಚ್ಚಿನ ಆಸಕ್ತಿ ನೀಡಬೇಕು. ಉತ್ತಮವಾದ ಆರೋಗ್ಯವನ್ನು ಕಪಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್.ಮಹದೇವಸ್ವಾಮಿ, ಕೈಗಾರಿಕಾ ಕೇಂದ್ರ ಸಹಾಯಕ ನಿರ್ದೇಶಕ ಮಲ್ಲೇಶ್, ಕಾಲೇಜಿನ ಉದ್ಯೋಗ ಕೋಶಾಧಿಕಾರಿ ಪಿ.ರೂಪಾದೇವಿ, ಐಕ್ಯೂಎಸಿ ಸಂಚಾಲಕಿ ಡಾ.ಲಲಿತಾ ಎಸ್.ಅನುರಾಧ, ಎನ್‌ಎಸ್‌ಎಸ್ ಸಂಚಾಲಕಿ ಎಸ್.ಆರ್.ದೀಪಾ, ಸಿಡಾಕ್ ತರಬೇತುದಾರ ಸಿ.ಅರಣ್‌ಕುಮಾರ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net