ಹೆತ್ತ ತಾಯಿಯನ್ನೇ ಹತ್ಯೆ ಮಾಡಿದ ಪುತ್ರ

Published on


ಶನಿವಾರಸಂತೆ: ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಪುರ ಗ್ರಾಮದಲ್ಲಿ ಬುಧವಾರ ರಾತ್ರಿ ತಾಯಿ ಮತ್ತು ಮಗನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಮಗನೇ ಹೆತ್ತ ತಾಯಿಯನ್ನು ಹತ್ಯೆ ಮಾಡಿದ್ದಾನೆ.


ಕಟ್ಟೆಪುರ ಗ್ರಾಮದ ಜೇನು ಕುರುಬರ ಹಾಡಿ ನಿವಾಸಿ ಲಲಿತಾ (45) ಹತ್ಯೆಯಾದವರು. ಬುಧವಾರ ರಾತ್ರಿ ಮನೆಗೆ ಕುಡಿದ ಬಂದ ಮಗ ರಾಜಶೇಖರ್(22)ನೊಂದಿಗೆ ತಾಯಿ ಜಗಳ ತೆಗೆದಿದ್ದಾಳೆ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದಾಗ ರಾಜಶೇಖರ್ ದೊಣ್ಣೆಯಿಂದ ತಾಯಿ ತಲೆಗೆ ಹೊಡೆದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಲಲಿತಾ ಮೃತಪಟ್ಟಿದ್ದಾರೆ.


ಮಾಹಿತಿ ತಿಳಿದು ಸ್ಥಳಕ್ಕೆ ಶನಿವಾರಸಂತೆ ಠಾಣೆ ಇನ್ಸ್‌ಪೆಕ್ಟರ್ ಎಸ್.ಪರಶಿವಮೂರ್ತಿ ಭೇಟಿ ನೀಡಿ ರಾಜಶೇಖರ್‌ನನ್ನು ಬಂಧಿಸಿ ಮಡಿಕೇರಿ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಿದರು. ನ್ಯಾಯಾಧೀಶರ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net