ಹೆದ್ದಾರಿ ವಿಭಜಕಕ್ಕೆ ಖಾಸಗಿ ಬಸ್ ಡಿಕ್ಕಿ

28ark2
28ಎಆರ್‌ಕೆ2.. ಅರಕಲಗೂಡು ತಾಲೂಕಿನ ಮೂಲೇಹೊಸಹಳ್ಳಿ ಗ್ರಾಮದ ಬಳಿ ರಸ್ತೆ ವಿಭಜಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.
Published on

ಅರಕಲಗೂಡು: ತಾಲೂಕಿನ ಮೂಲೇಹೊಸಹಳ್ಳಿ ಗ್ರಾಮದ ಬಳಿ ಶನಿವಾರ ಸಂಜೆ ಮಾಗಡಿ-ಸೋಮವಾರಪೇಟೆ ರಾಜ್ಯ ಹೆದ್ದಾರಿ ವಿಭಜಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ 55 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಡಿಕೇರಿ ಕಡೆಯಿಂದ ರಾಮನಾಥಪುರ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಕಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ರಭಸಕ್ಕೆ ಒಂದು ಭಾಗ ಡಿವೈಡರ್ ಮೇಲೆ ನಿಂತು ಜಖಂಗೊಂಡಿದೆ.

ಮಾಗಡಿ - ಸೋಮವಾರಪೇಟೆ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಮೂಲೇಹೊಸಹಳ್ಳಿ ಬಳಿ ಹೊಸದಾಗಿ ಚತುಷ್ಪಥ ರಸ್ತೆ ನಿರ್ಮಾಣವಾಗಿದ್ದು ಮಧ್ಯ ಭಾಗಕ್ಕೆ ವಿಭಜಕ ಅಳವಡಿಸಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಚಾಲಕ ಹೊಸದಾಗಿ ನಿರ್ಮಿಸಿದ್ದ ವಿಭಜಕ ಗಮನಿಸದೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಡಿವೈಡರ್ ಮುಂದೆ ರೆಡ್ ಸಿಗ್ನಲ್ ನಿಲ್ಲಿಸದೆ ಅವಘಡ ಸಂಭವಿಸಲು ಕಾರಣವಾಗಿದ್ದು, ಸಂಬಂಧಪಟ್ಟವರು ಇತ್ತ ಗಮನ ಹರಿಸಿ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ರಾಜಸ್ವ ನಿರೀಕ್ಷಕ ಧರ್ಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net