ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ಆಮೆವೇಗ

IMG_20230726_185800
Published on

ಆಲೂರು: ರಾಷ್ಟ್ರೀಯ ಹೆದ್ದಾರಿ-75ರ ವಿಸ್ತರಣಾ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದ್ದು, ಅರೆಬರೆ ಕಾಮಗಾರಿಯಿಂದ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ ಎಂದು ಕೆಪಿಸಿಸಿ ಸದಸ್ಯ ಯಡೇಹಳ್ಳಿ ಆರ್.ಮಂಜುನಾಥ್ ಆರೋಪಿಸಿದರು.


ಸುದ್ದಿಗಾರರೊಂದಿಗೆ ಇತ್ತೀಚೆಗೆ ಮಾತನಾಡಿದ ಅವರು, 45 ಕಿ.ಮೀ. ಹೆದ್ದಾರಿ ವಿಸ್ತರಣೆಗೆ 700 ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷೃದಿಂದ ಕಾಮಗಾರಿ ಹಳ್ಳ ಹಿಡಿದಿದೆ ಎಂದು ದೂರಿದರು.


ಹಾಸನದಿಂದ ಮಾರನಹಳ್ಳಿಯವರೆಗೆ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಭ್ರಷ್ಟ ಗುತ್ತಿಗೆದಾರರು ಹಾಗೂ ಇಂಜಿನಿಯರ್‌ಗಳನ್ನು ವಜಾಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net