ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ

24M.D.R.1
Published on

ಮದ್ದೂರು: ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಒಳ ಚರಂಡಿ ನೀರು ಹರಿಯುತ್ತಿದ್ದರೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸಂಗೊಳ್ಳಿ ರಾಯಣ್ಣ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಸದಸ್ಯರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ಮಾಡಿದರು.

ಸಂಘದ ಅಧ್ಯಕ್ಷ ಮ.ನ.ಪ್ರಸನ್ನಕುಮಾರ್ ಮಾತಾನಾಡಿ, ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಹೆದ್ದಾರಿ ಕಾಮಗಾರಿಗಾಗಿ ಗುಂಡಿ ಅಗೆಯಲಾಗಿದೆ. ಆದರೆ ವರ್ಷ ಕಳೆಯುತ್ತಾ ಬಂದರೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಪರಿಣಾಮ ಒಳ ಚರಂಡಿ ನೀರು ಹೆದ್ದಾರಿಯಲ್ಲಿ ಹರಿಯುತ್ತಿದೆ. ಜತೆಗೆ ಬಸ್ ನಿಲ್ದಾಣದ ಒಳಗೆ ಹಾಗೂ ಆಟೋ ನಿಲ್ದಾಣದ ಮುಂದೆ ಹರಿಯುತ್ತಿದೆ. ಇದರಿಂದ ಪಾದಚಾರಿಗಳು ಹಾಗೂ ಪ್ರಯಾಣಿಕರಿಗೆ ಕಿರಿ ಕಿರಿ ಉಂಟಾಗುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಸಂದೀಪ್, ಮನು, ಜೋಸೆಫ್, ಮಣಿಕಂಠ, ಕುಮಾರ್, ಶಂಕರ್, ವೆಂಕಟೇಶ, ಶಿವು, ಸುರೇಶ್, ಮಲ್ಲೇಶ್, ಪುನೀತ್, ಚಂದ್ರ, ರಮೇಶ್, ಉಮೇಶ್, ಸ್ವಾಮಿ, ರಾಮು, ಧರ್ಮ, ನಂದೀಶ್, ಸಿದ್ದಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net