ಹೆದ್ದಾರಿಯಲ್ಲಿ ಪೈರು ನಾಟಿ ಮಾಡಿ ಪ್ರತಿಭಟನೆ

byakodu WEB
Published on

ಬ್ಯಾಕೋಡು: ಗುಂಡಿಮಯವಾಗಿರುವ ರಾಷ್ಟ್ರೀಯ ಹೆದ್ದಾರಿ ಕಲ್ಲಿಮನೆ ಕಟ್ ನಾಗೋಡಿಯಲ್ಲಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ನಡು ರಸ್ತೇಲಿ ಬಾಳೆ ಗಿಡ, ಭತ್ತದ ಪೈರು, ಅಡಕೆ ಸಸಿ ನೆಟ್ಟು ಪ್ರತಿಭಟನೆ ನಡೆಸಿದರು.

ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ವ್ಯಾಪ್ತಿಯ ಮರಕುಟಕ-ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ನಿರ್ಮಾಣವಾಗಿವೆ. 3 ತಿಂಗಳಿಂದ ಗುಂಡಿಗಳು ಬಿದ್ದಿದ್ದು, ಇಲಾಖೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷೃದಿಂದ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗುತ್ತಿದೆ. ಅಧಿಕಾರಿಗಳು ವಾರದೊಳಗೆ ರಸ್ತೆ ರಿಪೇರಿ ಮಾಡದಿದ್ದಾರೆ ಉಗ್ರ ಹೋರಾಟ ನಡೆಸುವುದಾಗಿ ಸ್ಥಳೀಯ ರವಿ ಕಂಚಿಕೇರಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥರದ ಶಶಿ ಮರಾಠಿ, ವಿಜಯ್, ಸುರೇಶ್, ಚಂದ್ರಶೆಟ್ಟಿ, ರಾಮಚಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net