ಹೆಬ್ಬಾಲೆಯಲ್ಲಿ ಎತ್ತಿನ ಗಾಡಿ ಓಟದ ಸ್ಪರ್ಧೆ

28Kush04
ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಬನಶಂಕರಿ ದೇವಿ ಜಾತ್ರೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಎತ್ತಿನ ಗಾಡಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗಾಡಿಗಳು.
Published on

ಕುಶಾಲನಗರ: ಸಮೀಪದ ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಬನಶಂಕರಿ ದೇವಿ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾಜ್ಯಮಟ್ಟದ ಎತ್ತಿನ ಗಾಡಿ ಓಟ ಹಾಗೂ ಚಕ್ರಕಟ್ಟಿ ಗಾಡಿ ಓಡಿಸುವ ಸ್ಪರ್ಧೆ ನಡೆಯಿತು.

ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಸ್ಪರ್ಧೆಗೆ ಉದ್ಯಮಿ ಮೋಹನ್‌ಲಾಲ್ ಚೌಧರಿ ಚಾಲನೆ ನೀಡಿದರು. ಸ್ಪರ್ಧೆಯಲ್ಲಿ ಹೆಬ್ಬಾಲೆ ಸುತ್ತಮುತ್ತಲಿನ ಜನರು ಸೇರಿದಂತೆ ಮೈಸೂರು, ಚಿಕ್ಕಮಗಳೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳ ಗಡಿ ಭಾಗದ ಜನತೆ ಭಾಗವಹಿಸಿದ್ದರು.

ಗ್ರಾಮದ ಮಾದರಿ ಯುವಕ ಸಂಘದ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಚಕ್ರಕಟ್ಟಿ ಗಾಡಿ ಓಡಿಸುವ ಸ್ಪರ್ಧೆಗೆ 100 ಮೀಟರ್ ದೂರ ನಿಗದಿಪಡಿಸಲಾಗಿತ್ತು. ಎತ್ತಿನ ಗಾಡಿ ಸ್ಪರ್ಧೆಯಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೆ ಕ್ರಮವಾಗಿ 8 ಗ್ರಾಂ, 6 ಗ್ರಾಂ, 4 ಗ್ರಾಂ ಚಿನ್ನವನ್ನು ಬಹುಮಾನವಾಗಿ ನೀಡಲಾಯಿತು. ಚಕ್ರಕಟ್ಟಿ ಗಾಡಿ ಓಡಿಸುವ ಸ್ಪರ್ಧೆಗೆ 24ಕ್ಕೂ ಹೆಚ್ಚಿನ ಎತ್ತಿನ ಗಾಡಿ ಮಾಲೀಕರು ಪಾಲ್ಗೊಂಡಿದ್ದರು.

ರೋಮಾಂಚನಕಾರಿ ಹಾಗೂ ಸಾಹಸಮಯ ಕ್ರೀಡೆಯಾದ ಎತ್ತಿನ ಗಾಡಿ ಸ್ಪರ್ಧೆ ವೀಕ್ಷಿಸಲು ಸಾವಿರಾರೂ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ತೀರ್ಪುಗಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಕರುಂಬಯ್ಯ, ಬೋಜೇಗೌಡ, ಎಚ್.ಡಿ.ಲೋಹಿತ್ ಕುಮಾರ್ ಕಾರ್ಯನಿರ್ವಹಿಸಿದರು. ಗ್ರಾಪಂ ಅಧ್ಯಕ್ಷ ಎಚ್.ಎಸ್.ಮಂಜುನಾಥ್, ಮಾದರಿ ಯುವಕ ಸಂಘದ ಅಧ್ಯಕ್ಷ ಎಚ್.ಎಸ್.ಮಧುಸೂದನ್, ಗೌರವಾಧ್ಯಕ್ಷ ಎಚ್.ಆರ್.ಶ್ರೀನಿವಾಸ್, ಉಪಾಧ್ಯಕ್ಷ ಎಚ್.ಆರ್.ರವಿ, ಕಾರ್ಯದರ್ಶಿ ಎಚ್.ಎಂ.ತಿಮ್ಮಪ್ಪ, ಖಜಾಂಚಿ ಎಚ್.ಎಸ್.ರಘು, ಸಂಘಟನಾ ಕಾರ್ಯದರ್ಶಿ ತನುಕುಮಾರ್, ನಿರ್ದೇಶಕರಾದ ಶಮಂತ್, ಗಣೇಶ್, ಆದರ್ಶ, ಶ್ಯಾಮು, ಜಗದೀಶ್ ಪಟೇಲ್, ತ್ರಿನೇಶ್, ಮಣಿಕಂಠ, ದಿಲೀಪ್, ಸಲಹೆಗಾರರಾದ ಎಚ್.ಎಸ್.ಮಂಜುನಾಥ್, ಆರ್.ಆರ್.ಕುಮಾರ್, ನಿವೃತ್ತ ಸೈನಿಕ ಪುಟ್ಟೇಗೌಡ, ಚಂದ್ರಶೇಖರ್, ಎಚ್.ಈ.ಜಗದೀಶ್, ಪ್ರದೀಪ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net