

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರನ್ನು ಸಚಿವರು, ಶಾಸಕರು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿ, ಹುಬ್ಬಳ್ಳಿ ಸಿದ್ಧಾರೂಢ ಮಠದ ಪ್ರಸಾದ ನೀಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಚಿವ ಎಚ್.ಕೆ.ಪಾಟೀಲ, ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ಶಾಸಕ ಟಿ.ಡಿ.ರಾಜೇಗೌಡರ, ಶಾಸಕಿ ನಯನಾ ಮೋಟಮ್ಮ, ಎಂಎಲ್‌ಸಿ ಉಮಾಶ್ರೀ, ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಆರೋಗ್ಯ ವಿಚಾರಿಸಿದರು.
ಚಿಕ್ಕಮಗಳೂರಿನ ಗೌರಿ ಗದ್ದೆಯ ಅವಧೂತ ವಿನಯ ಗುರೂಜಿ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.