

ಮದ್ದೂರು: ತಾಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2025-26 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನ ಇತ್ತೀಚೆಗೆ ಆಯೋಜಿಸಲಾಗಿತ್ತು.
ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಲೀಲಾವತಿ ಮಾತನಾಡಿ, ಮನರೇಗಾ ಯೋಜನೆಯ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಗ್ರಾಪಂ ಅಧ್ಯಕ್ಷೆ ವೀಣಾ, ಉಪಾಧ್ಯಕ್ಷ ಅಪ್ಪಾಜಿಗೌಡ, ಸದಸ್ಯರಾದ ಎಚ್.ಕೆ.ನಂದೀಶ್‌ಗೌಡ, ಉಮೇಶ್, ವೀಣಾ, ನಾಗೇಶ್, ಮಧುಸೂದನ್, ತಾಂತ್ರಿಕ ಸಂಯೋಜಕ ರಮೇಶ್, ಐಇಸಿ ತಾಲೂಕು ಸಂಯೋಜಕಿ ಮಂಜುಳಾ ಇದ್ದರು.