ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದ ರಾಷ್ಟ್ರಪತಿ

IMG-20211008-WA0007
Published on

ಮಂಗಳೂರು: ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಶುಕ್ರವಾರ ಶೃಂಗೇರಿಗೆ ತೆರಳಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತೆರಳಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೂಡ ರಾಷ್ಟ್ರಪತಿಯವರೊಂದಿಗೆ ತೆರಳಿದರು.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಬೀಳ್ಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net