ಹೆಲಿಪ್ಯಾಡ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಡಿಸಿ

Published on

ಗುಂಡ್ಲುಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.18ರಂದು ತಾಲೂಕಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಶನಿವಾರ ಸ್ಥಳ ಪರಿಶೀಲಿಸಿದರು.

ಮಲೆ ಮಹದೇಶ್ವರಬೆಟ್ಟದಲ್ಲಿ ಸಚಿವ ಸಂಪುಟದ ಸಭೆ ನಡೆಸಿದ ನಂತರ ಜಿಲ್ಲಾ ಕೇಂದ್ರದಲ್ಲಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತಿರುವ ಕಾರಣ ಮುಖ್ಯಮಂತ್ರಿಗಳು ಬಂಡೀಪುರ ಅರಣ್ಯ ಪ್ರದೇಶದಲ್ಲಿನ ಸರಾಯ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡುವರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪನಾಗ್, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ್ ತಹಸೀಲ್ದಾರ್ ಟಿ.ರಮೇಶ್ ಬಾಬು, ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ನರೇಂದ್ರ ಮೋದಿ ಬಂಡೀಪುರಕ್ಕೆ ಭೇಟಿ ನೀಡಿದ್ದಾಗ ಮೇಲುಕಾಮನಹಳ್ಳಿ ಸಮೀಪ ಹೆಲಿಪ್ಯಾಡ್ ನಿರ್ಮಿಸಿದ ಜಮೀನಿನಲ್ಲಿ ಬೆಳೆ ಬೆಳೆದಿರುವ ಪರಿಣಾಮ ಪಟ್ಟಣದ ಊಟಿ ರಸ್ತೆಯಲ್ಲಿರುವ ಶಾಸಕ ಗಣೇಶ ಪ್ರಸಾದ್ ಅವರಿಗೆ ಸೇರಿದ ಭೂಮಿಯನ್ನು ಗುರ್ತಿಸಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net