ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ

1Kamal2
ಕಮಲನಗರದಲ್ಲಿ ಶನಿವಾರ ಬೀದರ್ ಪೊಲೀಸ್ ಠಾಣೆ ವತಿಯಿಂದ ರಾಜ್ಯದ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ ೫೦ರಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ನಿಮಿತ್ತ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಪಿಎಸ್‌ಐ ಚಂದ್ರಶೇಖರ ನಿರ್ಣೆ ಸವಾರರಿಗೆ ಹೆಲ್ಮೆಟ್ ವಿತರಿಸಿದರು. ಎಎಸ್‌ಐ ಉಮಾಜಿ ಇದ್ದರು.
Published on

ಕಮಲನಗರ: ಬೈಕ್ ಸವಾರರು ಕಡ್ಡಾಯ ಹೆಲ್ಮೆಟ್ ಧರಿಸಿ ಸವಾರಿ ಮಾಡಬೇಕು. ಇದರಿಂದ ತಮ್ಮ ಅಮೂಲ್ಯ ಜೀವ ಉಳಿಸಿಕೊಳ್ಳಲು ಸಾಧ್ಯವಾಗುವುದರ ಜತೆಗೆ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗುತ್ತದೆ ಎಂದು ಪಿಎಸ್‌ಐ ಚಂದ್ರಶೇಖರ ನಿರ್ಣೆ ಹೇಳಿದರು.

ಪಟ್ಟಣದಲ್ಲಿ ಶನಿವಾರ ಬೀದರ್ ಪೊಲೀಸ್ ಠಾಣೆ ವತಿಯಿಂದ ರಾಜ್ಯದ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ ೫೦ರಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ನಿಮಿತ್ತ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಸವಾರರಿಗೆ ಹೆಲ್ಮೆಟ್ ವಿತರಿಸಿ ಮಾತನಾಡಿದರು.

ಕಾರು ಸವಾರರು ಸೀಟ್ ಬೆಲ್ಟ್ ಕಡ್ಡಾಯ ಧರಿಸತಕ್ಕದು. ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ಹಾಕಲಾಗುವುದು. ಮಧ್ಯಪಾನ ಮತ್ತು ಮಾದಕ ವಸ್ತುಗಳನ್ನು ಸೇವಿಸಿ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬರೂ ಜಾಗೃತರಾಗಿ ವಾಹನ ಚಾಲನೆ ಮಾಡಬೇಕು ಎಂದರು.

ಎಎಸ್‌ಐ ಉಮಾಜಿ, ಸಿಬ್ಬಂದಿ ಲೋಕೇಶ, ಶಿವಾನಂದ, ಸಂತೋಷ, ನರೇಶ, ಮಹಾದೇವ ಬಿರಾದಾರ, ಪರಶುರಾಮ, ಸಂತೋಷ ಇದ್ದರು. ೧೩ ಜನರಿಗೆ ಹೆಲ್ಮೆಟ್ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net