ಹೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

4
Published on

ಚನ್ನಮ್ಮನ ಕಿತ್ತೂರು: ಸಮರ್ಪಕ ವಿದ್ಯುತ್​ ನೀಡುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು ಪಟ್ಟಣದ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಪ್ರತಿಭಟಿಸಿದ ಟನೆ ಸೋಮವಾರ ನಡೆದಿದೆ.

ಚನ್ನಮ್ಮನ ಕಿತ್ತೂರು ತಾಲೂಕಿನ ಕುಲವಳ್ಳಿ ಭಾಗದ 9 ಹಳ್ಳಿಗಳಿಗೆ ಒಂದು ತಿಂಗಳಿನಿಂದ ಸರಿಯಾಗಿ ವಿದ್ಯುತ್​ ನೀಡುತ್ತಿಲ್ಲ. ಇಲ್ಲಿಯ ಜನರಿಗೆ ಕುಡಿಯಲು ಸಹ ನೀರು ಸಿಗುತ್ತಿಲ್ಲ. ವಿದ್ಯುತ್​ ಇಲ್ಲದೆ ಕೃಷಿಗೆ ಸಾಕಷ್ಟು ತೊಂದರೆ ಆಗುತ್ತದೆ. ಶಾಲಾ ಮಕ್ಕಳು ಕತ್ತಲಲ್ಲಿ ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಎದುರಾಗಿದೆ. ಇದಕ್ಕೆಲ್ಲ ಹೆಸ್ಕಾಂ ಅಧಿಕಾರಿಗಳೇ ಕಾರಣ ಎಂದು ರೈತರು ದೂರಿದರು. ಹೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ನಡುವೆ ಒಳಜಗಳದಿಂದಾಗಿ ಹೀಗಾಗುತ್ತಿದ್ದು, ಕೂಡಲೆ ವಿದ್ಯುತ್​ ಸಮಸ್ಯೆ ಸರಿಪಡಿಸಬೇಕು ಎಂದು ಆಗ್ರಹಿಸಿದರು. ರೈತ ಮುಖಂಡ ಬಿಷ್ಠಪ್ಪ ಶಿಂಧೆ, ಗ್ರಾಪಂ ಸದಸ್ಯ ಮಹಾಂತೇಶ ಎಮ್ಮಿ, ಮುಖಂಡರಾದ ವಿಜಯಕುಮಾರ ಶಿಂಧೆ ಸೇರಿ ರೆತರು, ಯುವಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net