ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ 25ರಂದು

h22-hemaraddy
Published on

ಹುಬ್ಬಳ್ಳಿ: ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವದ ಅಂಗವಾಗಿ ಕುಸುಗಲ್ ರಸ್ತೆ ಶ್ರೀನಿವಾಸ ಗಾರ್ಡನ್​ನಲ್ಲಿ ಜೂ. 25ರಂದು ಬೆಳಗ್ಗೆ 10.30ಕ್ಕೆ ಶಾಸಕರಿಗೆ ಅಭಿನಂದನೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶ್ರೀ ಹೇಮ-ವೇಮ ರಡ್ಡಿ ಜನಸಂಘದ ಸದಸ್ಯಮಂಜುನಾಥ ಕಿರೇಸೂರ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಮಾಜದ 17 ಜನ ಶಾಸಕರಾಗಿದ್ದಾರೆ. ಮೂವರು ವಿಧಾನ ಪರಿಷತ್ ಸದಸ್ಯರಿದ್ದಾರೆ. ಇವರೆಲ್ಲರನ್ನು ಹಾಗೂ ದಾನಿಗಳಾದ ನಿಂಗನಗೌಡ ಪಾಟೀಲ, ವೆಂಕರಡ್ಡಿ ಕಿರೇಸೂರ ಹಾಗೂ ದಿವ್ಯಾ ಮಂಕಣಿ ಅವರನ್ನು ಸನ್ಮಾನಿಸಲಾಗುವುದು. ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ವಿವರಿಸಿದರು.

ಸಚಿವರಾದ ಎಚ್.ಕೆ. ಪಾಟೀಲ, ರಾಮಲಿಂಗಾರಡ್ಡಿ, ಶರಣಬಸಪ್ಪ ದರ್ಶನಾಪೂರ ಪಾಲ್ಗೊಳ್ಳುವರು. ಶಾಸಕ ಎನ್.ಎಚ್. ಕೋನರಡ್ಡಿ ಅಧ್ಯಕ್ಷತೆ ವಹಿಸುವರು. ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಗೋವಿಂದಪ್ಪ ಗೌಡಪ್ಪಗೋಳ ಉಪನ್ಯಾಸ ನೀಡುವರು. ಸಂಘವನ್ನು ಇತ್ತೀಚೆಗೆ ಸ್ಥಾಪಿಸಲಾಗಿದ್ದು, ಮೊದಲು ಸಮಾಜವನ್ನು ಸಂಘಟಿಸಲಾಗುವುದು. ನಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net