

ಹಾಸನ: ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಗಿರೀಶ್ (20) ಮೃತಪಟ್ಟ ದುರ್ದೈವಿ, ತಾಲ್ಲೂಕಿನ ಶೆಟ್ಟಿಹಳ್ಳಿ ಸಮೀಪ ಶುಕ್ರವಾರ ನಡೆದಿದೆ.
ಬೇಲೂರಿನ ಗಿರೀಶ್ ನಗರದ ರಾಜೀವ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಸರಿಯಾಗಿ ಈಜು ಬಾರದಿದ್ದರೂ ನೀರಿಗೆ ಇಳಿದಿದ್ದ ಕಾರಣಕ್ಕೆ ವಾಪಾಸ್ ಬರಲು ಸಾಧ್ಯವಾಗದೆ ನೀರುಪಾಲಾಗಿದ್ದಾರೆ. ನಂತರ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಮೃತದೇಹ ಹೊರತೆಗೆದರು. ಗೊರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಚಾರ ತಿಳಿದ ತಕ್ಷಣ ಮೃತ ವಿದ್ಯಾರ್ಥಿಯ ಪೋಷಕರು ಸ್ಥಳಕ್ಕೆ ಆಗಮಿಸಿದರು ಮೃತ ದೇಹವನ್ನು ಹೊರ ತೆಗೆದ ನಂತರ ಅವರ ಆಕ್ರಂದನ ಮುಗಿಲು ಮುಟ್ಟಿತ್ತು.