ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು

ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು
Published on

ಗೊರೂರು: ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಗೊರೂರಿನಲ್ಲಿ ಭಾನುವಾರ ಸಂಜೆ ನಡೆದಿದೆ.
ಗೊರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬುವರ ಪುತ್ರಿ ನಿತ್ಯಾ (19) ಮೃತ ಯುವತಿ.
ಹನುಮ ಜಯಂತಿ ಪೂಜೆಗಾಗಿ ಸಂಬಂಧಿಕರೊಂದಿಗೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯುವತಿ ತೆರಳಿದ್ದಳು. ಈ ವೇಳೆ ಪೂಜೆ ಸಲ್ಲಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.
ಯುವತಿಯ ಮೃತದೇಹಕ್ಕಾಗಿ ಅಗ್ನಿ ಶಾಮಕದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net