ಹೈಕ ಏಕೀಕರಣದ ಶಕ್ತಿ ಸರ್ದಾರ ಪಟೇಲರಿಗೆ ಸಿಎಂ ಬೊಮ್ಮಾಯಿ ನಮನ

IMG-20220917-WA0030
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ನಿಮಿತ್ತ ಕಲಬುರಗಿಯಲ್ಲಿ ಹೈದರಾಬಾದ್ ಕರ್ನಾಟಕ ಏಕೀಕರಣದ ರೂವಾರಿ, ಅಖಂಡ ಭಾರತದ ಶಕ್ತಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಗೆ ನಮನಗಳನ್ನು ಸಲ್ಲಿಸಿದರು.

ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆ ರಾಜ್ಯ ಸಚಿವ‌ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ, ಬಾಬುರಾವ ಚಿಂಚನಸೂರ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂ‌.ಎಲ್‌.ಸಿ. ಅಮರನಾಥ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net