ಹೈಕ ಶಿಕ್ಷಣ ಸಂಸ್ಥೆ ಚುನಾವಣೆ ಮಾ.16

HKE Socity
Published on

ಕಲಬುರಗಿ: ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ೨೦೨೪-೨೦೨೭ನೇ ಸಾಲಿನ ಆಡಳಿತ ಮಂಡಳಿಗೆ ಚುನಾವಣೆ ಮಾ.೧೬ರಂದು ನಡೆಸಲು ನಿರ್ಧರಿಸಲಾಗಿದೆ. ಸಂಸ್ಥೆಯ ಪಿಡಿಎ ಇಂಜಿನಿಯರಿAಗ್ ಕಾಲೇಜ್‌ನ ಆಡಳಿತ ಮಂಡಳಿ ಕಚೇರಿಯಲ್ಲಿ ಸಂಸ್ಥೆ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಂಡಳಿಯ ಸಭೆಯಲ್ಲಿ ದಿನಾಂಕ ನಿಗದಿಪಡಿಸಲಾಗಿದೆ. ಪ್ರಸ್ತುತ ಆಡಳಿತ ಮಂಡಳಿಯ ಎಲ್ಲ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡ ಸಭೆಯಲ್ಲಿ ಮಾ.೧೬ರಂದು ಚುನಾವಣೆ ನಡೆಸಿ, ಮರುದಿನ ಮತ ಎಣಿಕೆ ನಡೆಸುವ ಕುರಿತು ಚರ್ಚಿಸಲಾಯಿತು. ಚುನಾವಣಾಧಿಕಾರಿಯಾಗಿ ಖ್ಯಾತ ಹಿರಿಯ ವೈದ್ಯ ಡಾ.ಪಿ.ಎಸ್.ಶಂಕರ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಧಿಕೃತ ಅಧಿಸೂಚನೆ ಇನ್ನು ಹೊರಡಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net