ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ

Adequate implementation of agricultural machinery
Published on

ಚಿತ್ರದುರ್ಗ: ಕೃಷಿ ಯಂತ್ರಧಾರೆ ಕೇಂದ್ರಗಳ ಬಲವರ್ಧನೆಗಾಗಿ ಪ್ರಸಕ್ತ ಸಾಲಿನ ರಾಜ್ಯ ಕೃಷಿ ವಲಯ ಕೃಷಿ ಯಾಂತ್ರೀಕರಣ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ. ಜಿಲ್ಲೆಗೆ ಸಾಮಾನ್ಯ ವರ್ಗದಡಿ ಎಫ್‌ಪಿಒ, ಎನ್‌ಜಿಒ, ಇತರೆ ಸಂಘ- ಸಂಸ್ಥೆಗಳು ಚಾಲ್ತಿಯಲ್ಲಿರುವ ಸಿಎಚ್‌ಎಸ್‌ಸಿಗಳಿಗೆ ಒಂದು ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಒಂದು ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಸೆ. 30 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net