ಹೈನುಗಾರಿಕೆಯಲ್ಲಿ ತೊಡಗಿ ಆರ್ಥಿಕವಾಗಿ ಸದೃಢರಾಗಿ

12Anand7
Published on

|ಹೈನುಗಾರಿಕೆಯಲ್ಲಿ ತೊಡಗಿ ಆರ್ಥಿಕವಾಗಿ ಸದೃಢರಾಗಿ

|ಡಾ.ಮಂಜುನಾಥ ಚೌರಡ್ಡಿ ಅಭಿಪ್ರಾಯ

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಕೃಷಿಯೊಂದಿಗೆ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡು ಆರ್ಥಿಕವಾಗಿ ಸದೃಢರಾಗಿ ಎಂದು ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಂಜುನಾಥ ಚೌರಡ್ಡಿ ಅಭಿಪ್ರಾಯ ಪಟ್ಟರು.

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ಶುಕ್ರವಾರ ಆಯೋಜಿಸಿದ್ದ ರೈತರಿಗೆ ಮೂರು ದಿನಗಳ ಹೈನೋದ್ಯಮ ಹಾಗೂ ಪಶುಸಂಗೋಪನೆಯಲ್ಲಿ ಉದ್ಯಮಶೀಲತೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಹಾಲು ಉತ್ಪಾದನೆಯು ಸಮರ್ಪಕವಾಗಿದ್ದು, ಗುಣಮಟ್ಟದ ಹಾಲು ಉತ್ಪಾದನೆ ಇಂದು ಅಗತ್ಯವಾಗಿದೆ. ಜತೆಗೆ ಹೈನುಗಾರಿಕೆಯಲ್ಲಿ ರೈತರು ಉತ್ತಮ ಲಾಭಾಂಶ ಪಡೆಯಬಹುದು.ಈ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ತಂತ್ರಜ್ಞಾನಗಳನ್ನು ಒಳಗೊಂಡ ಉತ್ತಮ ತರಬೇತಿಯನ್ನು ನೀಡಲಾಗಿದೆ. ಶಿಬಿರಾರ್ಥಿಗಳು ಇದರ ಲಾಭ ಪಡೆದು ಉತ್ತಮ ಉದ್ಯಮಿಯಾಗಬೇಕೆಂದು ಸಲಹೆ ನೀಡಿದರು.

ಅತಿಥಿಗಳಾಗಿ ಆಗಮಿಸಿದ ಮುಖ್ಯ ಪಶು ವೈದ್ಯಾಧಿಕಾರಿ ಡಾ.ವಿರೂಪಾಕ್ಷ ಅಡ್ಡಣಗಿ ಮಾತನಾಡಿ, ಹೈನುಗಾರಿಕೆ ಜತೆಗೆ ಆಡು ಹಾಗೂ ಕುರಿ ಸಾಕಾಣಿಕೆಗಳನ್ನು ಕೈಗೊಂಡು ಅಧಿಕ ಲಾಭ ಪಡೆದುಕೊಳ್ಳಬೇಕೆಂದು ರೈತರಿಗೆ ಸಲಹೆ ನೀಡಿದರು. ಕೇಂದ್ರದ ಪಶು ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಗುರುರಾಜ ಕೌಜಲಗಿ, ಪಶು ವೈದ್ಯಕೀಯ ಸಹಾಯಕ ವಿನೋದ ಕರಡಿಗುದ್ದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net