ಹೊಟ್ಟೆ ನೋವು ತಾಳಲಾರದೆ ಗೃಹಿಣಿ ಆತ್ಮಹತ್ಯೆ

Published on

ಕುಣಿಗಲ್​: ಹೊಟ್ಟೆನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ಗೃಹಿಣಿ ಚಿಕಿತ್ಸೆ ಲಿಸದೆ ಗುರುವಾರ ಮೃತಪಟ್ಟಿದ್ದಾರೆ. ತಾಲೂಕಿನ ಅಮೃತ್ತೂರು ಹೋಬಳಿ ಅರ್ಜುನಹಳ್ಳಿಯ ಸವಿತಾ(26)ಮೃತೆ. ಕುಣಿಗಲ್​ ತಾಲೂಕಿನ ಹುತ್ರಿದುರ್ಗ ಹೋಬಳಿಯ ಚನ್ನತಿಮ್ಮಯ್ಯನಪಾಳ್ಯದ ಸವಿತಾ ಅರ್ಜುನಹಳ್ಳಿಯ ರಮೇಶ್​ ಅವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹಲವು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸವಿತಾ ಕ್ರಿಮಿನಾಶಕದ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಸವಿತಾ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಲಿಯೂರುದುರ್ಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net