ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ

Published on

ಯಳಂದೂರು: ತಾಲೂಕಿನ ಮಾಂಬಳ್ಳಿ ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ಮಾಂಬಳ್ಳಿ ಗ್ರಾಮದ ರಾಜಪ್ಪ ಎಂಬುವರ ಪುತ್ರಿ ಹೇಮಸ್ಮಿತಾ(17) ಆತ್ಮಹತ್ಯೆಗೆ ಶರಣಾದವರು. ಈಕೆ ಮೈಸೂರಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಕೆಲವು ದಿನಗಳಿಂದ ಬರುತ್ತಿದ್ದ ಹೊಟ್ಟೆನೋವು ತಾಳಲಾರದೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net