

ಶ್ರೀರಂಗಪಟ್ಟಣ: ತಾಲೂಕಿನ ನೇರಳೆಕೆರೆ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗ್ರಾಮದ ನಾಗರಾಜು(30) ಆತ್ಮಹತ್ಯೆ ಮಾಡಿಕೊಂಡವ. ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಈತ ಹೊಟ್ಟೆ ನೋವು ತಾಳಲಾರದೆ ಶನಿವಾರ ಮನೆಯಲ್ಲೇ ಕ್ರಿಮಿನಾಶಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿ ಹಾಗೂ ಕುಟುಂಬಸ್ಥರು ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿವಾಹಿತನಾಗಿದ್ದು ಇಬ್ಬರು ಮಕ್ಕಳಿದ್ದಾರೆ.