ಹೊಟ್ಟೆಯಲ್ಲೇ ಮಗು ಸಾವು

Published on

ತುಮಕೂರು: ಹೊಟ್ಟೆ ನೋವು ಎಂದು ಭಾನುವಾರ ತುಮಕೂರು ಜಿಲ್ಲಾಸ್ಪತ್ರೆಗೆ ಆಗಮಿಸಿದ್ದ ತುಂಬು ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗದೆ ಮಗು ಹೊಟ್ಟೆಯಲ್ಲಿ ಮೃತಪಟ್ಟಿದ್ದು, ಗರ್ಭಿಣಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಶಾಂತಿ ನಗರದ ಫಿಸಾಪರ್ಡೊಸ್​ ಎಂಬಾಕೆ ಹೊಟ್ಟೆ ನೋವು ಎಂದು ಜಿಲ್ಲಾಸ್ಪತ್ರೆಗೆ ಆಗಮಿಸಿದಾಗ ವೈದ್ಯಾಧಿಕಾರಿಗಳು ಸರಿಯಾಗಿ ಸ್ಪಂದಿಸದ ಕಾರಣ ಮಗು ಹೊಟ್ಟೆಯಲ್ಲೇ ಮೃತಪಟ್ಟಿದೆ ಎನ್ನಲಾಗಿದೆ. ವಿಷಯ ತಿಳಿದ ಕುಟುಂಬಸ್ಥರು ಮಗು ಸಾಯಲು ವೈದ್ಯರೇ ಕಾರಣ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net