ಹೊನ್ನವಳ್ಳಿ ಗ್ರಾಮ ಪಂಚಾಯಿತಿಗೆ ಆಯ್ಕೆ

2ark-5
Published on

ಅರಕಲಗೂಡು: ತಾಲೂಕಿನ ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಶೀಪುರ ಸ್ವಾಮಿಗೌಡ, ಉಪಾಧ್ಯಕ್ಷರಾಗಿ ನೈಗೆರೆ ಅಂಜುಶ್ರೀ ಸುಹಾಸ್ ಚುನಾಯಿತರಾದರು.


ಮಂಗಳವಾರ ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸ್ವಾಮಿಗೌಡ 8 ಮತಗಳನ್ನು ಪಡೆದು ಆಯ್ಕೆಯಾದರು. ಪ್ರತಿಸ್ಪರ್ಧಿ ಧರ್ಮಪ್ಪ 5 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಂಜುಶ್ರೀ 8 ಮತಗಳನ್ನು ಪಡೆದು ಆಯ್ಕೆಯಾದರೆ ಲಕ್ಷ್ಮೀ 5 ಮತಗಳನ್ನು ಪಡೆದರು. ಚುನಾವಣಾಧಿಕಾರಿಯಾಗಿ ಕೊಣನೂರು ಹಾರಂಗಿ ಪುನರ್ವಸತಿ ಉಪ ವಿಭಾಗದ ಇಂಜಿನಿಯರ್ ವೆಂಕಟೇಶ್ ಕಾರ್ಯನಿರ್ವಹಿಸಿದರು. ಪಿಡಿಒ ಗೋಪಾಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net