ಹೊನ್ನೂರಿಗೆ ನಟ ಧನಂಜಯ್ ಭೇಟಿ

10 yelandru 01
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ಭೇಟಿ ನೀಡಿದ ನಟ ಡಾಲಿ ಧನಂಜಯ್ ಅವರನ್ನು ಅಭಿಮಾನಿಗಳು ಸ್ವಾಗತಿಸಿದರು.
Published on

ಯಳಂದೂರು:

ತಾಲೂಕಿನ ಹೊನ್ನೂರು ಗ್ರಾಮಕ್ಕೆ ಸೋಮವಾರ ನಟ ಡಾಲಿ ಧನಂಜಯ್ ಭೇಟಿ ನೀಡಿದರು.

ಹೊನ್ನೂರು ಗ್ರಾಮದ ಡಾ.ಅಂಬೇಡ್ಕರ್ ಪ್ರತಿಮೆಗೆ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಪ್ರಜೆಗಳೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಭುಗಳು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ಮೂಲಕ ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಆದರ್ಶ, ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳಬೇಕೆಂದರು.

ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net