ಹೊರಗುತ್ತಿಗೆ ನೌಕರರನ್ನು ಕೆಲಸಕ್ಕೆ ಸೇರಿಸಿಕೊಳ್ಳಿ

6 sgr 2
Published on

ಸಾಗರ: ಬಿಸಿಎಂ ವಿದ್ಯಾರ್ಥಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ‘ಡಿ’ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮ ಖಂಡಿಸಿ ಹಾಗೂ ತಕ್ಷಣ ಅವರನ್ನು ಕೆಲಸಕ್ಕೆ ತೆಗೆದುಕೊಳ್ಳುವುದು ಸೇರಿ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಹೊರಗುತ್ತಿಗೆ ನೌಕಕರು ಎಸಿ ಕಚೇರಿಗೆ ಮನವಿ ಸಲ್ಲಿಸಿದರು.

ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಕರೊನಾ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು ಆರಂಭವಾಗಿಲ್ಲ. ಇದರಿಂದ ವಿದ್ಯಾರ್ಥಿ ನಿಲಯಗಳು ನಡೆಯುತ್ತಿಲ್ಲ. ಆದರೆ ವಿದ್ಯಾರ್ಥಿ ನಿಲಯಗಳಲ್ಲಿ 15 ವರ್ಷಗಳಿಂದ ಅಡುಗೆ ಕೆಲಸ ಮಾಡುತ್ತಿರುವವರನ್ನು ಕೆಲಸದಿಂದ ತೆಗೆದು ಹಾಕಿರುವುದು ಅಮಾನವೀಯ ಎಂದು ದೂರಿದರು.

ಅಡುಗೆ ಸಹಾಯಕರನ್ನು ಏಕಾಏಕಿ ತೆಗೆದು ಹಾಕಿರುವುದನ್ನು ಖಂಡಿಸಿ ಡಿಸಿ ಕಚೇರಿ ಎದುರು ಮತ್ತು ಸಾಗರ ಎಸಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದರು.

ಹೊರಗುತ್ತಿಗೆ ನೌಕರರಾದ ರೇಣುಕಮ್ಮ, ಗಾಯತ್ರಮ್ಮ, ಮಹೇಶ್, ರವಿ, ಜಯಂತ್, ಮಂಜಪ್ಪ, ದಿನೇಶ್, ದೇವರಾಜ್, ದೇವಕಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net