

ಹೊಲಿಗೆ ಯಂತ್ರಕ್ಕಾಗಿ ಮಹಿಳೆಯರ ಪ್ರತಿಭಟನೆ
ಮುಗಳಖೋಡ: ಪಟ್ಟಣದ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ ನಗರ ಯೋಜನೆ ಅಡಿಯಲ್ಲಿ ನೀಡಲಾಗುವ ಹೊಲಿಗೆ ಯಂತ್ರ ವಿತರಿಸುವಲ್ಲಿ ತಾರತಮ್ಯ ಎಸಗಿ ಎಂದು ಆರೋಪಿಸಿ ಮಹಿಳೆಯರು ಸೋಮವಾರ ಪುರಸಭೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಅರ್ಹರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿ ಬೇರೆ ಫಲಾನುಭವಿಗಳ ಹೆಸರನ್ನು ಸೇರಿಸಲಾಗಿದೆ ಎಂದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮಹಿಳೆಯರು ದೂರಿದರು.
ಫಲಾನುಭವಿಗಳ ಪಟ್ಟಿಯನ್ನು ಮತ್ತೊಮ್ಮೆ ಪರಿಷ್ಕರಣೆ ಮಾಡಿ ಎರಡು ಮೂರು ದಿನಗಳಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸುವ ವ್ಯವಸ್ಥೆಯನ್ನು ಮಾಡುತ್ತೇವೆ ಎಂದು ಮುಖ್ಯಾಧಿಕಾರಿ ಉದಯಕುಮಾರ ಘಟಕಾಂಬಳೆ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಗಿದೆ.