ಹೊಸ ಇತಿಹಾಸ ಸೃಷ್ಟಿಸಿದ ಭಾರತ

Shivkumar Swamiji
Published on

ಬೀದರ್: ಚಂದ್ರನ ದಕ್ಷಿಣ ಧ್ರುವದ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಇತಿಹಾಸ ಸೃಷ್ಟಿಸಿದೆ ಎಂದು ಸಿದ್ಧಾರೂಢ ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಹೇಳಿದ್ದಾರೆ.
ವಿಜ್ಞಾನಿಗಳ ಅವಿರತ ಪ್ರಯತ್ನ ಫಲ ನೀಡಿದೆ. ಚಂದ್ರಯಾನ 3 ಯೋಜನೆಯ ಯಶಸ್ಸಿನಿಂದಾಗಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ತಿಳಿಸಿದ್ದಾರೆ.
ಭಾರತ ಚಂದ್ರನನ್ನು ತಲುಪಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿದೆ. ದಕ್ಷಿಣ ಧ್ರುವವನ್ನು ತಲುಪಿದ ಮೊದಲ ರಾಷ್ಟ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು, ಭಾರತೀಯರಿಗೆ ಹೆಮ್ಮೆ ಹಾಗೂ ಅಭಿಮಾನದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ಬಾಹ್ಯಾಕಾಶ ಕ್ಷೇತ್ರದಲ್ಲಿನ ಭಾರತೀಯ ವಿಜ್ಞಾನಿಗಳ ಮಹತ್ವದ ಸಾಧನೆಯನ್ನು ಶ್ರೀಗಳು ಕೊಂಡಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net