ಹೊಸ ಕೈಪಿಡಿಯಂತೆ ದರ್ಶನ್‌ಗೆ ಸೌಲಭ್ಯ

Published on

ಬಳ್ಳಾರಿ : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಜೈಲಿನ ಹೊಸ ಕೈಪಿಡಿಯಂತೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.
ಇತ್ತೀಚೆಗೆ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಪರ ವಕೀಲರು ಭೇಟಿ ನೀಡಿದ ವೇಳೆ, ದರ್ಶನ್‌ಗೆ ಜೈಲಿನ ಹೊಸ ಕೈಪಿಡಿಯಂತೆ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೆ ನ್ಯಾಯಾಲಯಕ್ಕೆ ಮೊರೆ ಹೋಗಲಾಗುವುದು ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಜೈಲು ಅಧಿಕಾರಿಗಳ ಬಳಿ ತಿಳಿಸಿದ್ದರು. ಜೈಲಿನ ಹೊಸ ಕೈಪಿಡಿ ನಿಯಮದಂತೆ ದರ್ಶನ್‌ಗೆ ಸೌಲಭ್ಯ ಕಲ್ಪಿಸಲಾಗಿದೆ. ಎಲ್ಲ ಕೈದಿಗಳಂತೆ ದರ್ಶನ್ ಕೂಡ ಒಬ್ಬ ಕೈದಿಯಾಗಿದ್ದಾರೆ. ಅದರಲ್ಲಿ ಬೇರೆ ಯಾವ ವಿಶೇಷತೆ ಇಲ್ಲ. ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿರುವುದು ಬಗ್ಗೆ ಇಲ್ಲಿಯವರೆಗೆ ನಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಜೈಲು ಅಧೀಕ್ಷಕಿ ಲತಾ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net