ಹೊಸ ಭರವಸೆ ಮೂಡಿಸಿದ ಬಜೆಟ್

Revansidd Jadar
Published on

ಬೀದರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ವಿದ್ಯಾರ್ಥಿ ಮುಖಂಡ ರೇವಣಸಿದ್ದ ಜಾಡರ್ ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ಮೀಸಲಿಡಲಾಗಿದೆ. ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ, ಮಕ್ಕಳ ಬಸ್, ಪ್ರಥಮ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪಾಲಿಟೆಕ್ನಿಕ್‍ಗಳಲ್ಲಿ ಯೋಗ ತರಬೇತಿ ಘೋಷಣೆಗಳು ಸಂತಸ ಉಂಟು ಮಾಡಿವೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಲಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net